ಕಲಬುರಗಿ,ಜೂ.21 : ಪ್ರಸಕ್ತ 2026-27ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನುಸಲಾಗಿದೆ. ಯಾರು ಯಾರು ಅರ್ಜಿ ಸಲ್ಲಿಸಬಹುದು. ಅರ್ಜಿ ಹೇಗೆ ಸಲ್ಲಿಸಬೇಕು ? ಪೂರ್ಣ ವಿವರ ಇದರಲ್ಲಿದೆ ಓದಿ.
ಅಲೆಮಾರಿ , ಅರೆಅಲೆಮಾರಿ ಜನಾಂಗದ ಮೆಟ್ರಿಕ್ ನಂತರದ ಅರ್ಹತಾ ವಿದ್ಯಾರ್ಥಿ ವೇತನ, ಶುಲ್ಕ ಮರುಪಾವತಿ ಮತ್ತು ವಿದ್ಯಾಸಿರಿ–ಊಟ ಮತ್ತು ವಸತಿ ಸಹಾಯ ಯೋಜನೆಯಡಿ ಸೌಲಭ್ಯಕ್ಕಾಗಿ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ /ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಸೇಡಂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ಪ್ರವೇಶ ಬಯಸುವ ವಿದ್ಯಾರ್ಥಿಗಳು https://ssp.postmatric.karnataka.gov.in ವೆಬ್ಸೈಟ್ದಲ್ಲಿ ಆನ್ಲೈನ್ ಮೂಲಕ 2026ರ ಆಗಸ್ಟ್ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ನಂತರ ಆನ್ಲೈನ್ ಅರ್ಜಿಯ ಪ್ರತಿ ಹಾಗೂ ಅಪಲೋಡ್ ಮಾಡಲಾದ ದಾಖಲಾತಿಗಳ ಸ್ವಯಂ ಧೃಢೀಕೃತ ಪ್ರತಿಗಳನ್ನು ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಂದ ಧೃಢೀಕರಿಸಿ ಸೇಡಂ ತಾಲೂಕಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ 2026ರ ಆಗಸ್ಟ್ 31 ರೊಳಗಾಗಿ ಕಡ್ಡಾಯವಾಗಿ ಸಲ್ಲಿಸಿ ಸ್ವೀಕೃತಿ ಪಡೆಯಬೇಕು.
ಒಂದು ವೇಳೆ ನಿಗದಿತ ದಿನಾಂಕದೊಳಗೆ ದಾಖಲೆ ಸಲ್ಲಿಸದಿದ್ದಲ್ಲಿ ಅಂತಹ ಅರ್ಜಿ ಅನುರ್ಜಿತಗೊಳಿಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ https://bcwd.karnataka.gov.in ವೆಬ್ಸೈಟ್ಗೆ ಸಂಪರ್ಕಿಸಲು ಕೋರಲಾಗಿದೆ.
ಸೇಡಂ ತಾಲೂಕಿನ ಪ್ರತಿಯೊಬ್ಬ ಮೆಟ್ರಿಕ್ ನಂತರದ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ ಭವಿಷ್ಯದಲ್ಲಿ ಸ್ಕಾಲರಸಿಪ್ ಪಡೆಯುವಂತಾಗಲಿ.





