ಜಾಹೀರಾತಿಗಾಗಿ ನಮ್ಮನ್ನು ಸಂಪರ್ಕಿಸಬಹುದು

ರೈತರೇ ನೆನಪಿರಲಿ ! ಬೆಳೆ ವಿಮೆ ನೋಂದಣಿಗೆ ಜುಲೈ 31 ಕೊನೆಯ ದಿನ

July 8, 2026 7:59 PM
---Advertisement---
ಕಲಬುರಗಿ,ಜು.08 :-2026-27ನೇ ಸಾಲಿನ ಮುಂಗಾರು ಹಂಗಾಮಿಗಾಗಿ ಮರುವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಯನ್ನು (R-WBCIS) ಅನುಷ್ಠಾನಗೊಳಿಸಲು ಮಂಜೂರಾತಿ ನೀಡಿದ್ದು, ಈ ಯೋಜನೆಯಡಿ ರೈತರು ಹತ್ತಿರದ ಬ್ಯಾಂಕ್, ಗ್ರಾಮ ಒನ್ ಕೇಂದ್ರ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಾಯಿಸಿಕೊಳ್ಳಲು 2026ರ ಜುಲೈ 31 ರಂದು ಕೊನೆಯ ದಿನವಾಗಿದೆ ಎಂದು ಕಲಬುರಗಿ (ಜಿ.ಪಂ.) ತೋಟಗಾರಿಕೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ಜಿಲ್ಲೆಯಲ್ಲಿ ಪಪ್ಪಾಯಿ ಮತ್ತು ಹಸಿರು ಮೆಣಸಿನಕಾಯಿ ಬೆಳೆಗಳನ್ನು ಎಲ್ಲಾ ಗ್ರಾಮ ಪಂಚಾಯಿತಿ/ನಗರ ಮತ್ತು ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಹಾಗೂ ದ್ರಾಕ್ಷಿ ಬೆಳೆಯನ್ನು ಅಫಜಲಪೂರ-(22), ಆಳಂದ-(15), ಚಿಂಚೋಳಿ-(2), ಚಿತ್ತಾಪೂರ-(1), ಕಲಬುರಗಿ-(6), ಜೇವರ್ಗಿ-(4) ಹಾಗೂ ಯಡ್ರಾಮಿ ತಾಲ್ಲೂಕಿನ-(10) ಗ್ರಾಮ ಪಂಚಾಯಿತಿ/ನಗರ ಮತ್ತು ಸ್ಥಳೀಯ ಸಂಸ್ಥೆಯ ವ್ಯಾಪ್ತಿಯಲ್ಲಿ ಬರುವ ತಾಕುಗಳು ಬೆಳೆ ವಿಮೆ ಯೋಜನೆಗೆ ಒಳಪಡಿಸಲಾಗಿದೆ.

ಹಸಿರು ಮೆಣಸಿನಕಾಯಿ, ಪಪ್ಪಾಯಿ ಮತ್ತು ದ್ರಾಕ್ಷಿ ಬೆಳೆಗಳಿಗೆ ಪ್ರತಿ ಹೆಕ್ಟೇರ್‍ಗೆ ಕ್ರಮವಾಗಿ 3,550 ರೂ., 6,700 ರೂ. ಮತ್ತು 14,000 ರೂ. ವಿಮಾ ಕಂತಿನ ಮೊತ್ತ ನಿಗದಿಯಾಗಿದ್ದು, ವಿಮಾ ಮೊತ್ತ ಪ್ರತಿ ಹೆಕ್ಟರ್‍ಗೆ 71,000 ರೂ., 1,34,000 ರೂ. ಮತ್ತು 2,80,000 ರೂ. ಗಳನ್ನು ನಿಗದಿಪಡಿಸಲಾಗಿದೆ.
2026-27ನೇ ಸಾಲಿನಲ್ಲಿ ಈ ಯೋಜನೆ ಅನುಷ್ಠಾನಗೊಳಿಸಲು ಕಲಬುರಗಿ ಜಿಲ್ಲೆಗೆ ಅಗ್ರಿಕಲ್ಚರಲ್ ಇನ್ಸುರೆನ್ಸ್ ಕಂಪನಿಯ(Agricultural Insurance Company(AIC) ವಿಮಾ ಕಂಪನಿಯು ಆಯ್ಕೆಯಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ತಮ್ಮ ತಾಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು/ರೈತ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು/ ಹತ್ತಿರದ ಬ್ಯಾಂಕುಗಳ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ.

WhatsApp

Join Now

Telegram

Join Now

Leave a Comment