ಕಲಬುರಗಿ 2: ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಕೈಬಿಟ್ಟಿರುವುದನ್ನು ಖಂಡಿಸಿ ಜಿಲ್ಲಾ ಬಿಜೆಪಿ ಕಾರ್ಯಕರ್ತರು ಕಲಬುರಗಿಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿದರು. , ಬಿಜೆಪಿ ರಸ್ತೆ ತಡೆ ನಡುವೆಯೇ ಬೈಕ್ ಸವಾರನೊಬ್ಬ ನುಸುಳಿ ಬಂದಾಗ ತೀವ್ರ ಕೆಂಡಾಮಂಡಲವಾದ ಮಾಜಿ ಶಾಸಕ ರಾಜಕುಮಾರ ಪಾಟೀಲ್ ತೇಲ್ಕೂರ, ಬೈಕ್ ಸವಾರನ ಹೆಲ್ಮೆಟ್ ಕುತ್ತು ಜೋರಾಗಿ ರೋಡಿಗೆಸೆದು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಎಸ್.ವಿ.ಪಿ. ವೃತ್ತದಿಂದ ಆರಂಭವಾದ ಬಿಜೆಪಿ ಪ್ರತಿಭಟನಾ ಮೆರವಣಿಗೆ, ಜಿಲ್ಲಾಧಿಕಾರಿ ಕಚೇರಿ ಮುಂಭಾಗಕ್ಕೆ ಆಗಮಿಸಿತು. ಈ ವೇಳೆ ಬಿಜೆಪಿ ಕಾರ್ಯಕರ್ತರು ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
BJP Protest in Kalburagi
ಪ್ರತಿಭಟನೆಯ ಸಂದರ್ಭದಲ್ಲಿ ಟೈಯರ್ಗೆ ಬೆಂಕಿ ಹಚ್ಚಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಕಲಬುರಗಿ ಜಿಲ್ಲೆಯಲ್ಲಿ ಮೂವರು ಸಚಿವರು ಇದ್ದರೂ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಣೆ ಮಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಮುಖಂಡರು ಆರೋಪಿಸಿದರು.
ಕಲಬುರಗಿ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಪ್ರದೇಶವೆಂದು ಘೋಷಿಸಿ, ಸಂಕಷ್ಟದಲ್ಲಿರುವ ರೈತರಿಗೆ ತಲಾ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಬಿಜೆಪಿ ಆಗ್ರಹಿಸಿತು.
Read this also : ರೈತರಿಗೆ ಮಧ್ಯಂತರ ಪರಿಹಾರ 18 ಕೋಟಿ ರೂ. ಶೀಘ್ರ ಮಂಜೂರು | 8 crore crop insurance quickly sanctioned
ಇದೇ ವೇಳೆ, ಸರ್ಕಾರ ಕೂಡಲೇ ಬರ ಘೋಷಣೆ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಲಬುರಗಿ ಬಂದ್ಗೆ ಕರೆ ನೀಡಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಬಿಜೆಪಿ ಮುಖಂಡರು ಎಚ್ಚರಿಕೆ ನೀಡಿದರು.
ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೆಸೆದು ತೇಲ್ಕೂರ ಆಕ್ರೋಶ
ಇನ್ನು ಪ್ರತಿಭಟನೆ ವೇಳೆ ಮಾಜಿ ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರ ಅವರು ಬೈಕ್ ಸವಾರನ ಹೆಲ್ಮೆಟ್ ಕಿತ್ತೆಸೆದ ಘಟನೆ ಕೂಡ ನಡೆಯಿತು. | BJP Protest in Kalburagi : ಬೈಕ್ ಸವಾರನ ಹೆಲ್ಮೆಟ್ ನೆಲಕ್ಕೆಸೆದು ತೆಲ್ಕೂರ್ ಆಕ್ರೋಶ |
ಕಲಬುರಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ಮಾಡುತ್ತಿದ್ದ ಸಂದರ್ಭದಲ್ಲಿ, ಪ್ರತಿಭಟನೆಯ ನಡುವೆಯೇ ಬೈಕ್ ಸವಾರನೊಬ್ಬ ರಸ್ತೆ ದಾಟಲು ಮುಂದಾಗಿದ್ದಾನೆ.
ರಸ್ತೆ ತಡೆ ನಡೆಸುತ್ತಿದ್ದರೂ ಬೈಕ್ ಸವಾರ ನುಸುಳಿಕೊಂಡು ಬಂದಿದ್ದಕ್ಕೆ ತೀವ್ರ ಆಕ್ರೋಶಗೊಂಡ ರಾಜಕುಮಾರ್ ಪಾಟೀಲ್ ತೇಲ್ಕೂರ, ಬೈಕ್ ನಿಲ್ಲಿಸಿ ಸವಾರನ ಹೆಲ್ಮೆಟ್ ಕಿತ್ತುಕೊಂಡು ಜೋರಾಗಿ ನೆಲಕ್ಕೆ ಎಸೆದಿದ್ದಾರೆ.
ಈ ಘಟನೆ ಪ್ರತಿಭಟನಾ ಸ್ಥಳದಲ್ಲಿ ಕೆಲಕಾಲ ಗಮನ ಸೆಳೆಯಿತು. ಒಟ್ಟಿನಲ್ಲಿ, ಕಲಬುರಗಿ ಜಿಲ್ಲೆಯನ್ನು ಬರಪೀಡಿತ ಪ್ರದೇಶಗಳ ಪಟ್ಟಿಗೆ ಸೇರಿಸಬೇಕು ಹಾಗೂ ರೈತರಿಗೆ ತಕ್ಷಣ ಪರಿಹಾರ ನೀಡಬೇಕು ಎಂಬ ಆಗ್ರಹದೊಂದಿಗೆ ಬಿಜೆಪಿ ನಡೆಸಿದ ಪ್ರತಿಭಟನೆ, ಸರ್ಕಾರದ ವಿರುದ್ಧದ ರಾಜಕೀಯ ಸಂಘರ್ಷಕ್ಕೆ ಮತ್ತಷ್ಟು ತೀವ್ರತೆ ನೀಡಿದೆ.







