ಬೆಂಗಳೂರು ಜು.18:- ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಧರ್ಮಪತ್ನಿ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ತಾಯಿ, ಶ್ರೀಮತಿ ಚೆನ್ನಮ್ಮ (89) ಅವರು ಇಂದು ನಿಧನರಾಗಿದ್ದಾರೆ.
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಸಂಜೆ ನಿಧನರಾಗಿದ್ದಾರೆ.
ಶ್ರೀಮತಿ ಚೆನ್ನಮ್ಮ ಅವರು ರಾಜಕೀಯದಲ್ಲಿ ಸಕ್ರಿಯರಾಗಿರದಿದ್ದರೂ, ದೇವೇಗೌಡರ ರಾಜಕೀಯ ಜೀವನದುದ್ದಕ್ಕೂ ಅವರ ಬೆನ್ನೆಲುಬಾಗಿ ನಿಂತವರು. ಚೆನ್ನಮ್ಮ ಅವರು, 1954ರಲ್ಲಿ ಎಚ್.ಡಿ. ದೇವೇಗೌಡರನ್ನು ವಿವಾಹವಾದರು. ನಾಲ್ವರು ಪುತ್ರರು ಮತ್ತು ಇಬ್ಬರು ಪುತ್ರಿಯರು. ಪುತ್ರರಲ್ಲಿ ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮತ್ತು ಶಾಸಕ ಎಚ್.ಡಿ. ರೇವಣ್ಣ ಪ್ರಮುಖರು.
ಚೆನ್ನಮ್ಮ ಅವರು ಸಾಮಾನ್ಯವಾಗಿ ರಾಜಕೀಯ ಪ್ರಚಾರ ಹಾಗೂ ಪಕ್ಷದ ಕಾರ್ಯಕ್ರಮಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದರು. ಸಾರ್ವಜನಿಕ ಜೀವನದಲ್ಲಿ ಅತ್ಯಂತ ಸರಳ ವ್ಯಕ್ತಿತ್ವದ ಮೂಲಕ ಜನ ಮಾನಸದಲ್ಲಿ ಗುರುತುಸಿಕೊಂಡವರು.
ಇತ್ತೀಚೆಗೆ ಉಸಿರಾಟದ ತೊಂದರೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇವತ್ತು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.
ಅವರ ನಿಧನಕ್ಕೆ ದೇವೇಗೌಡರ ಅಪಾರ ಬೆಂಬಲಿಗರು ಶೋಕ ಸಾಗರದಲ್ಲಿ ಮುಳುಗಿದ್ದಾರೆ.
ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ
By Editor
July 18, 2026 6:20 PM
---Advertisement---





