ಸತ್ತವರ ಹೆಸರಿಗೂ ಗ್ಯಾರೆಂಟಿ ಹಣ: ಗ್ಯಾರೆಂಟಿ ಅಕ್ರಮ ! ಅಕ್ರಮದ ಹಣ ವಸೂಲಿಗೆ ಮುಂದಾದ ಸರಕಾರ | Guarantee money in the name of the deceased | ಕಲಬುರಗಿ: ಗ್ಯಾರೆಂಟಿ ಯೋಜನೆಯ ಹಣ ಅರ್ಹರಿಗೆ ತಲುಪಬೇಕು. ಅದು ಬಿಟ್ಟು ಅನರ್ಹರು ಪಡೆದುಕೊಂಡರೆ ಮುಲಾಜಿಲ್ಲದೇ ವಸೂಲಿ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ. ಈಗಾಗಲೇ ಈ ರೀತಿ ತಪ್ಪಾದ ವ್ಯಕ್ತಿಗಳ ಅಕೌಂಟ್ ಗೆ ಹೋದ ಹಣವೇ ೧೦೦ ಕೋಟಿ ಮೀರಿದೆ. ಈ ಪೈಕಿ ೧೫ ಕೋಟಿ ರೂಪಾಯಿ ಮರಳಿ ವಸೂಲಿ ಮಾಡಿಕೊಳ್ಳಲಾಗಿದೆ. ಉಳಿದ ಹಣವನ್ನು ಮರಳಿ ಪಡೆಯಲು ಬ್ಯಾಂಕುಗಳೊಂದಿಗೆ ಸಮನ್ವಯ ಸಾಧಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ರೇವಣ್ಣ ತಿಳಿಸಿದ್ದಾರೆ.
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸಬಲೀಕರಣಕ್ಕೆ ಮಹತ್ವದ ಕೊಡುಗೆ ನೀಡಿದ್ದು, ಯೋಜನೆಗಳ ದುರುಪಯೋಗವನ್ನು ತಡೆಗಟ್ಟುವ ಮೂಲಕ ಅರ್ಹ ಫಲಾನುಭವಿಗಳಿಗೆ ಮಾತ್ರ ಸೌಲಭ್ಯ ತಲುಪುವಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ.
14 ರಿಂದ 15 ಕೋಟಿ ಈಗಾಗಲೇ ವಾಪಸ್
ಕಲಬುರಗಿ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಯೋಜನೆಗಳ ಅನುಷ್ಠಾನ ವೇಳೆ ಪತ್ತೆಯಾದ ಅಕ್ರಮಗಳನ್ನು ತಡೆಯಲು ಸರ್ಕಾರ ಕ್ರಮ ಕೈಗೊಂಡಿದ್ದು, ತಪ್ಪಾಗಿ ವರ್ಗಾವಣೆಯಾಗಿದ್ದ ಸುಮಾರು 14 ರಿಂದ 15 ಕೋಟಿ ಮೊತ್ತವನ್ನು ಈಗಾಗಲೇ ವಾಪಸ್ ಪಡೆಯಲಾಗಿದೆ. ಉಳಿದಿರುವ ಸುಮಾರು 100 ಕೋಟಿ ಮೊತ್ತದ ವಸೂಲಾತಿಗೆ ಬ್ಯಾಂಕುಗಳೊಂದಿಗೆ ಸಮನ್ವಯ ಸಾಧಿಸಿ ಅಗತ್ಯ ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿಸಿದರು.
ಸತ್ತವರ ಹೆಸರಿಗೂ ಗ್ಯಾರೆಂಟಿ ಹಣ: ಗ್ಯಾರೆಂಟಿ ಅಕ್ರಮ ! ಅಕ್ರಮದ ಹಣ ವಸೂಲಿಗೆ ಮುಂದಾದ ಸರಕಾರ | Guarantee money in the name of the deceased
ಪರಿಶೀಲನೆ ವೇಳೆ ಮೃತಪಟ್ಟವರ ಖಾತೆಗಳಿಗೆ ಹಣ ಜಮೆಯಾಗಿರುವುದು, ಒಂದೇ ಬ್ಯಾಂಕ್ ಖಾತೆಗೆ 20ಕ್ಕೂ ಹೆಚ್ಚು ಫಲಾನುಭವಿಗಳನ್ನು ಲಿಂಕ್ ಮಾಡಿರುವುದು ಹಾಗೂ ಬ್ಯಾಂಕ್ ಖಾತೆ ಇಲ್ಲದಿದ್ದರೂ ಹಣ ವರ್ಗಾವಣೆಯಾಗಿರುವಂತಹ ಗಂಭೀರ ಲೋಪಗಳು ಬೆಳಕಿಗೆ ಬಂದಿವೆ ಎಂದು ರೇವಣ್ಣ ಹೇಳಿದರು.
Read this also : ರೈತರಿಗೆ ಸಿಹಿ ಸುದ್ದಿ : ಸಬ್ಸಿಡಿ ಮೂಲಕ ಸೋಲಾರ ಪಂಪಸೆಟ್ ಪಡೆಯಲು ಅರ್ಜಿ ಆಹ್ವಾನ | application invitation for solar pumpset subsidy 2026
ಗೃಹಲಕ್ಷ್ಮಿ ಯೋಜನೆಯಡಿ ಕಲಬುರಗಿ ಜಿಲ್ಲೆಯಲ್ಲಿ 9,156 ಮೃತ ಫಲಾನುಭವಿಗಳನ್ನು ಗುರುತಿಸಲಾಗಿದ್ದು, ಅವರ ಖಾತೆಗಳಿಗೆ ಒಟ್ಟು 4.27 ಕೋಟಿ ಜಮೆಯಾಗಿದೆ. ಈ ಪೈಕಿ 5,336 ಖಾತೆಗಳಲ್ಲಿ ಹಣ ವರ್ಗಾವಣೆಯನ್ನು ತಡೆಹಿಡಿಯಲಾಗಿದ್ದು, ಇದುವರೆಗೆ ಕೇವಲ 25.84 ಲಕ್ಷ ಮಾತ್ರ ವಸೂಲಿ ಮಾಡಲಾಗಿದೆ.
ವಸೂಲಾತಿ ಪ್ರಗತಿ ತೃಪ್ತಿಕರವಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಮುಂದಿನ 8 ರಿಂದ 10 ದಿನಗಳೊಳಗೆ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆ ಮನೆ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ:
ಗ್ಯಾರಂಟಿ ಯೋಜನೆಗಳಡಿ ಫಲಾನುಭವಿಗಳ ಖಾತೆಗೆ ಜಮೆಯಾಗುವ ಹಣವನ್ನು ಕೆಲವು ಬ್ಯಾಂಕುಗಳು ಹಳೆಯ ಸಾಲಗಳಿಗೆ ಹೊಂದಾಣಿಕೆ ಮಾಡಿಕೊಳ್ಳುತ್ತಿರುವ ಬಗ್ಗೆ ದೂರುಗಳು ಬಂದಿವೆ. ಇದು ನಿಯಮಬಾಹಿರವಾಗಿದ್ದು, ಇಂತಹ ಕ್ರಮಗಳನ್ನು ತಕ್ಷಣ ನಿಲ್ಲಿಸುವಂತೆ ಬ್ಯಾಂಕುಗಳಿಗೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.
Read this also : ನೀರಿನ ಮೇಲೆ ಗಂಟೆಗಟ್ಟಲೇ ಯೋಗ ಮೈ ನವಿರೇಳಿಸುವ ಜಲಯೋಗಿಯ ಸಾಹಸ | Hours of yoga on the water
ಅನ್ನಭಾಗ್ಯ ಯೋಜನೆಯಲ್ಲಿ ಅಕ್ರಮ ತಡೆ:
ಅನ್ನಭಾಗ್ಯ ಯೋಜನೆಯಡಿ ಆಹಾರ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಮಾಹಿತಿ ನೀಡಿದ ಅವರು, ನಿಯಮ ಉಲ್ಲಂಘಿಸಿದ 14 ನ್ಯಾಯಬೆಲೆ ಅಂಗಡಿಗಳ ಪರವಾನಗಿ ರದ್ದುಪಡಿಸಲಾಗಿದೆ. ಅಲ್ಲದೆ 6,874 ಬೋಗಸ್ ಪಡಿತರ ಚೀಟಿಗಳನ್ನು ರದ್ದುಪಡಿಸಿ, 9,631 ಕ್ವಿಂಟಾಲ್ ಅಕ್ರಮ ಆಹಾರ ಧಾನ್ಯಗಳನ್ನು ಜಪ್ತಿ ಮಾಡಲಾಗಿದೆ ಎಂದು ತಿಳಿಸಿದರು. ಜುಲೈ 2023ರಿಂದ ಡಿಸೆಂಬರ್ 2024ರವರೆಗೆ ಅನ್ನಭಾಗ್ಯ ಯೋಜನೆಯಡಿ ಡಿಬಿಟಿ ಮೂಲಕ 508.72 ಕೋಟಿ ಫಲಾನುಭವಿಗಳ ಖಾತೆಗಳಿಗೆ ಜಮೆ ಮಾಡಲಾಗಿದೆ ಎಂದರು.
ಶಕ್ತಿ ಯೋಜನೆಗೆ 608 ಕೋಟಿ ಬಿಡುಗಡೆ:
ಶಕ್ತಿ ಯೋಜನೆಯಡಿ ಸಾರಿಗೆ ಸಂಸ್ಥೆಗಳಿಗೆ ಬಿಡುಗಡೆಯಾಗಬೇಕಿದ್ದ ಬಾಕಿ ಮೊತ್ತದಲ್ಲಿ ಶೇ.80ರಷ್ಟು, ಅಂದರೆ 608 ಕೋಟಿ ಹಣವನ್ನು ಸರ್ಕಾರ ಬಿಡುಗಡೆ ಮಾಡಿದೆ. ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಹೆಚ್ಚುವರಿಯಾಗಿ 124 ಬಸ್ ಶೆಡ್ಯೂಲ್‍ಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.






