ಜಾಹೀರಾತಿಗಾಗಿ ನಮ್ಮನ್ನು ಸಂಪರ್ಕಿಸಬಹುದು

ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ : ಮಳೆ ಅಲರ್ಟ ಜಿಲ್ಲೆಗಳು ಯಾವವು ? ಇಲ್ಲಿದೆ ಪೂರ್ಣ ಮಾಹಿತಿ

July 19, 2026 8:09 PM
---Advertisement---
ಬೆಂಗಳೂರು, ಜು.19: ಬರಗಾಲ ಭೀತಿಯಿಂದ ಕಂಗೆಟ್ಟ ರಾಜ್ಯದ ಜನರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಜುಲೈ 19ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಒಳನಾಡು ಕರ್ನಾಟಕ: ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಇದಲ್ಲದೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.

ದಕ್ಷಿಣ ಒಳನಾಡು ಕರ್ನಾಟಕ: ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

WhatsApp

Join Now

Telegram

Join Now

Leave a Comment