ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ | Heavy rain warning in Karnataka | ಬೆಂಗಳೂರು, ಜು.19: ಬರಗಾಲ ಭೀತಿಯಿಂದ ಕಂಗೆಟ್ಟ ರಾಜ್ಯದ ಜನರಿಗೆ ಹವಾಮಾನ ಇಲಾಖೆ ಗುಡ್ ನ್ಯೂಸ್ ನೀಡಿದೆ. ರಾಜ್ಯದ ವಿವಿಧ ಭಾಗಗಳಲ್ಲಿ ಜುಲೈ 19ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಕರ್ನಾಟಕ: ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.\
ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ | Heavy rain warning in Karnataka
ಉತ್ತರ ಒಳನಾಡು ಕರ್ನಾಟಕ: ವಿಜಯಪುರ, ಕಲಬುರಗಿ, ಗದಗ, ಕೊಪ್ಪಳ, ರಾಯಚೂರು ಹಾಗೂ ಬೀದರ್ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
Read this also : ಶೀಘ್ರ ಸಚಿವ ಸಂಪುಟ ವಿಸ್ತರಣೆ ಸಿಎಂ ಡಿ ಕೆ ಶಿವಕುಮಾರ್ | Cabinet expansion soon cm dk shivakumar
ಇದಲ್ಲದೆ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಯಾದಗಿರಿ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ದಕ್ಷಿಣ ಒಳನಾಡು ಕರ್ನಾಟಕ: ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಅನೇಕ ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ ಮುನ್ಸೂಚನೆ: ಮುಂದಿನ 24 ಗಂಟೆಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಗರದ ಕೆಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.




