ಜಾಹೀರಾತಿಗಾಗಿ ನಮ್ಮನ್ನು ಸಂಪರ್ಕಿಸಬಹುದು

ಬಿರುಗಾಳಿ ಸಹಿತ ಸುರಿಯಲಿದೆ ಭಾರೀ ಮಳೆ ! ಸಾರ್ವಜನಿಕರೇ ಎಚ್ಚರ !! Heavy rain will fall with the storm!

July 22, 2026 9:48 PM
---Advertisement---

ಬೆಂಗಳೂರು, ಜುಲೈ 22: ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಹಾಗೂ ಬಿರುಗಾಳಿಯ ಸಾಧ್ಯತೆ ಇದೆ Heavy rain will fall with the storm! ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ

ಉತ್ತರ ಕನ್ನಡ ಜಿಲ್ಲೆಯಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಒಂದೆರಡು ಕಡೆಗಳಲ್ಲಿ ಭಾರೀದಿಂದ ಅತಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆ ಆಗುವ ನಿರೀಕ್ಷೆಯಿದೆ.

ಉತ್ತರ ಒಳನಾಡು ಕರ್ನಾಟಕ:

ಬೆಳಗಾವಿ, ವಿಜಯಪುರ, ಕಲಬುರಗಿ ಹಾಗೂ ಬೀದರ್ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.

ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಕೆಲವೆಡೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಸುರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಮಲೆನಾಡು: ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆ ಆಗುವ ಸಾಧ್ಯತೆಯಿದೆ.

ಬಳ್ಳಾರಿ, ದಾವಣಗೆರೆ, ಮೈಸೂರು ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಸುರಿಯುವ ನಿರೀಕ್ಷೆಯಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆ ಆಗುವ ಸಾಧ್ಯತೆ ಇದೆ.

ಭಾರೀ ಮಳೆ ಹಾಗೂ ಬಿರುಗಾಳಿಯ ಮುನ್ಸೂಚನೆ ಹಿನ್ನೆಲೆಯಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.

WhatsApp

Join Now

Telegram

Join Now

Leave a Comment