ಜಾಹೀರಾತಿಗಾಗಿ ನಮ್ಮನ್ನು ಸಂಪರ್ಕಿಸಬಹುದು

ವಿಪ್ರರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ 2026 | Loan facility to Brahmins

August 3, 2026 3:44 PM
Loan facility to Brahmins
---Advertisement---

ವಿಪ್ರರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ 2026 | Loan facility to Brahmins

ಬೆಂಗಳೂರು, ಜುಲೈ 21:- ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆಯ 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸಿರುವ ಕುರಿತ ಕರಪತ್ರವನ್ನು ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ ಅವರು ಇಂದು ವಿಧಾನಸೌಧದಲ್ಲಿ ಬಿಡುಗಡೆ ಮಾಡಿದರು.

ಈ ವೇಳೆ ಮಾತನಾಡಿ, ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಮತ್ತು ಇನ್ನಿತರ ಯೋಜನೆಗಳನ್ನು ರೂಪಿಸಿ, ಬ್ರಾಹ್ಮಣ ಸಮುದಾಯದ ಬಡವರ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದೆ. ಎಲ್ಲ ವರ್ಗದ ಬಡವರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಡಿಸಿಎಂ ಪರಮೇಶ್ವರ ಅವರು ಹೇಳಿದರು.

ವಿಪ್ರರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ 2026 | Loan facility to Brahmins

ನಮ್ಮ ಸರ್ಕಾರವು 2025-26ನೇ ಸಾಲಿನಲ್ಲಿ ನೂತನವಾಗಿ ‘ವಿಪ್ರ ಸ್ವ ಉದ್ಯಮ ನೇರ ಸಾಲ’ ಯೋಜನೆಯನ್ನು ಮಂಡಳಿಯ ವತಿಯಿಂದ ಪ್ರಾರಂಭಿಸಿ, ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಹಸು ಸಾಕಾಣಿಕೆಯಂತಹ ಉದ್ಯೋಗ ಕೈಗೊಳ್ಳಲು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯ ಅಡಿಯಲ್ಲಿ ಕನಿಷ್ಠ ರೂ. 1 ಲಕ್ಷ ಹಾಗೂ ಗರಿಷ್ಠ ರೂ.2 ಲಕ್ಷಗಳ ಸಾಲ-ಸಹಾಯಧನ ನೀಡಲಾಗಿರುತ್ತದೆ. ಇದರಲ್ಲಿ ಶೇ 20 ಸಬ್ಸಿಡಿಯನ್ನು ನೀಡಲಾಗಿರುತ್ತದೆ. ಉಳಿಕೆ ಶೇ. 80 ಸಾಲದ ಮೊತ್ತಕ್ಕೆ ಶೇ 4ರಷ್ಟು ಬಡ್ಡಿಯಂತೆ ಒಟ್ಟು 34 ಕಂತುಗಳಲ್ಲಿ ಸಾಲ ಮರು ಪಾವತಿಸಬೇಕಾಗಿದೆ. ರಾಜ್ಯದಲ್ಲಿ ಬ್ರಾಹ್ಮಣ ಸಮುದಾಯದಲ್ಲಿ ಹಿಂದುಳಿದವರು ಈ ಸಾಲ ಯೋಜನೆಯ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಮುಂದೆ ಬರಬೇಕು ಎಂದು ಉಪಮುಖ್ಯಮಂತ್ರಿಗಳಾದ
ಡಾ. ಜಿ. ಪರಮೇಶ್ವರ ಅವರು ಹೇಳಿದರು.

Read this also : ನಿರುದ್ಯೋಗಿ ಪದವಿಧರರಿಗೆ ಗುಡ್ ನ್ಯೂಸ್ : 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಸಚಿವ ಸಂಪುಟ ಅನುಮೋದನೆ | cabinet approves appointment of 15 thousand teachers

2025-26ನೇ ಸಾಲಿನಲ್ಲಿ ಒಟ್ಟು 1333 ಅರ್ಜಿ ಸ್ವೀಕೃತವಾಗಿದ್ದು, ಇದರಲ್ಲಿ ರೂ. 20.60 ಕೋಟಿ ವೆಚ್ಚದಲ್ಲಿ ಒಟ್ಟು 1048 ಫಲಾನುಭವಿಗಳಿಗೆ ಸಾಲ ಸಹಾಯಧನ ಮಂಜೂರು ಮಾಡಲಾಗಿರುತ್ತದೆ. ಸಾಲ ಮರುಪಾವತಿಯ ಮೊದಲ ಹಾಗೂ ಎರಡನೇ ಕಂತಿನಲ್ಲಿ ಶೇ 98ರಷ್ಟು ಸಾಲ ಮರುಪಾವತಿಯನ್ನು ಪಡೆಯುವಲ್ಲಿ ಮಂಡಳಿಯು ಯಶಸ್ವಿಯಾಗಿರುತ್ತದೆ. ಇದು ಒಂದು ಹೆಮ್ಮೆಯ ವಿಷಯವಾಗಿರುತ್ತದೆ. ಮಂಡಳಿಯಿಂದ ಸಾಲ ಪಡೆದ ಎಲ್ಲಾ ಫಲಾನುಭವಿಗಳು ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ಸಕಾಲದಲ್ಲಿ ಮರುಪಾವತಿ ಮಾಡಿದ್ದಲ್ಲಿ, ಮಂಡಳಿಯಿಂದ ಸಮುದಾಯದ ಇನ್ನು ಹೆಚ್ಚಿನ ಸಮುದಾಯದವರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು.

2026-27 ನೇ ಸಾಲಿನಲ್ಲಿ “ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ” ಗೆ ಅರ್ಜಿ ಆಹ್ವಾನಿಸಿದ್ದು, ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ. ಬ್ರಾಹ್ಮಣ ಸಮುದಾಯದಲ್ಲಿ ಹಿಂದುಳಿದವರು ಅರ್ಜಿ ಸಲ್ಲಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ ಅವರು ಹೇಳಿದರು.
Read this also : ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ | Farmer PM Devegowda’s wife chennamma passed away

ಈ ಸಂದರ್ಭದಲ್ಲಿ ಕಂದಾಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ ಅವರು, ಮಂಡಳಿಯ ಅಧ್ಯಕ್ಷರಾದ ಅಸಗೋಡು ಜಯಸಿಂಹ, ಮಂಡಳಿಯ ವ್ಯವಸ್ಥಾಪಕ ನಿರ್ದೇಶಕಿ ದೀಪಶ್ರೀ ಹಾಗೂ ಮಂಡಳಿಯ ನಿರ್ದೇಶಕರುಗಳು ಉಪಸ್ಥಿತರಿದ್ದರು.

WhatsApp

Join Now

Telegram

Join Now

1 thought on “ವಿಪ್ರರಿಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ 2026 | Loan facility to Brahmins”

Leave a Comment